Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:1 - ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:1
27 ತಿಳಿವುಗಳ ಹೋಲಿಕೆ  

ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.


ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.


ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:


“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.


ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.


ಪಟ್ಟಣಗಳಲ್ಲಿದ್ದ ತಮ್ಮ ಸೊತ್ತುಗಳಿಗೆ ಹಿಂದಿರುಗಿ ಬಂದವರಲ್ಲಿ ಇಸ್ರಯೇಲಿನ ಜನಸಾಮಾನ್ಯರೂ ಯಾಜಕರೂ ಲೇವಿಯರೂ ದೇವಾಲಯದ ಕೆಲಸದವರೂ ಸೇರಿದ್ದರು.


ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು