Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:68 - ಕನ್ನಡ ಸತ್ಯವೇದವು C.L. Bible (BSI)

68 ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇವಿುನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟುವದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:68
20 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.


ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.


ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.


ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.


“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


6720 ಕತ್ತೆಗಳೂ ಇದ್ದವು.


ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - 400 ಕಿಲೋಗ್ರಾಂ ಬೆಳ್ಳಿ ಮತ್ತು ನೂರು ಯಾಜಕ ವಸ್ತ್ರಗಳು.


ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು