Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:11 - ಕನ್ನಡ ಸತ್ಯವೇದವು C.L. Bible (BSI)

11 ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:11
32 ತಿಳಿವುಗಳ ಹೋಲಿಕೆ  

ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II


ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.


ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.


ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು