ಎಜ್ರ 3:2 - ಕನ್ನಡ ಸತ್ಯವೇದವು C.L. Bible (BSI)2 ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. ಅಧ್ಯಾಯವನ್ನು ನೋಡಿ |
ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.