Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:3 - ಕನ್ನಡ ಸತ್ಯವೇದವು C.L. Bible (BSI)

3 ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಸುತ್ತಣ ಪ್ರಾಂತಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ ಅದರ ಮೇಲೆ ಯೆಹೋವನಿಗೋಸ್ಕರ ಪ್ರಾತಃಸ್ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಮ್ಮ ಸುತ್ತಲು ವಾಸಿಸುವ ಅನ್ಯಜನರಿಗೆ ಅವರು ಭಯಪಟ್ಟರೂ ಹಳೆಯ ಅಸ್ತಿವಾರದ ಮೇಲೆ ವೇದಿಕೆಯನ್ನು ಕಟ್ಟಿದರು. ಅವರು ಹಾಗೆ ಮಾಡುವುದನ್ನು ನಿಲ್ಲಿಸಲಿಲ್ಲ. ಕಟ್ಟಿ ಮುಗಿಸಿದ ಬಳಿಕ ಬೆಳಿಗ್ಗೆ, ಸಾಯಂಕಾಲ ಹೋಮಯಜ್ಞಾದಿಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:3
11 ತಿಳಿವುಗಳ ಹೋಲಿಕೆ  

ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.


ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.


ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.


ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು