Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:4 - ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:4
14 ತಿಳಿವುಗಳ ಹೋಲಿಕೆ  

“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,


ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗಿದ್ದ ಎಲ್ಲ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ಮೇಲ್ವಿಚಾರಕರು, “ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲಿ ಮುಗಿಸಬೇಕು" ಎಂದು ಹೇಳಿ ಅವಸರಪಡಿಸುತ್ತಿದ್ದರು.


ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.


(ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ತಿಳಿಸಿದರು:


‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು