Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:5 - ಕನ್ನಡ ಸತ್ಯವೇದವು C.L. Bible (BSI)

5 ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:5
19 ತಿಳಿವುಗಳ ಹೋಲಿಕೆ  

‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.


ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿ ಇವುಗಳನ್ನು ಹಾಗು


ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು


ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,


ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.


ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.


“ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:


ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು