Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:8 - ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ ಇವರ ಸಹೋದರರಾದ ಇತರ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇವಿುಗೆ ತಿರಿಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:8
14 ತಿಳಿವುಗಳ ಹೋಲಿಕೆ  

ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.


ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.


ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಬಾಬಿಲೋನಿಯರಿಂದ ಸೆರೆಯಾಳಾಗಿ ಒಯ್ಯಲ್ಪಟ್ಟ ಅರಸ ಯೆಕೊನ್ಯನ ವಂಶಜರು ಇವರು: ಯೆಕೊನ್ಯನಿಗೆ ಏಳು ಜನ ಗಂಡುಮಕ್ಕಳು: ಶೆಯಲ್ತೀಯೇಲ್,


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು