Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:17 - ಕನ್ನಡ ಸತ್ಯವೇದವು C.L. Bible (BSI)

17 ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:17
11 ತಿಳಿವುಗಳ ಹೋಲಿಕೆ  

“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.


ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:


ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”


ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು