Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:19
10 ತಿಳಿವುಗಳ ಹೋಲಿಕೆ  

ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು