Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್‍ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:3
16 ತಿಳಿವುಗಳ ಹೋಲಿಕೆ  

ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,


ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು