Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:5 - ಕನ್ನಡ ಸತ್ಯವೇದವು C.L. Bible (BSI)

5 ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ಉದ್ದೇಶವನ್ನು ಕೆಡಿಸುವದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ಇಟ್ಟುಕೊಂಡರು. ಪಾರಸಿಯ ರಾಜನಾದ ಕೋರೆಷನ ಕಾಲ ಮೊದಲುಗೊಂಡು ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯವರೆಗೂ ಈ ಪ್ರಕಾರ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:5
9 ತಿಳಿವುಗಳ ಹೋಲಿಕೆ  

ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.


ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು