Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್‍ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ಯೆಹೂದ್ಯರನ್ನು ಪ್ರಬೋಧಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:1
9 ತಿಳಿವುಗಳ ಹೋಲಿಕೆ  

ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೊಟ್ಟ ಸಂದೇಶವೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು