Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:14 - ಕನ್ನಡ ಸತ್ಯವೇದವು C.L. Bible (BSI)

14 ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ತೆಗೆದುಕೊಂಡುಹೋಗಿ ಬಾಬೆಲಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇವಿುಸಿದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:14
16 ತಿಳಿವುಗಳ ಹೋಲಿಕೆ  

ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.


ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.


ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು