Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:6 - ಕನ್ನಡ ಸತ್ಯವೇದವು C.L. Bible (BSI)

6 ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:6
7 ತಿಳಿವುಗಳ ಹೋಲಿಕೆ  

“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.


ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.


ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.


ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:


ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು