Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:8 - ಕನ್ನಡ ಸತ್ಯವೇದವು C.L. Bible (BSI)

8 “ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:8
20 ತಿಳಿವುಗಳ ಹೋಲಿಕೆ  

ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:


ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.


ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:


ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.


ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು