Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:9 - ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿನ ಹಿರಿಯರ ಹತ್ತಿರ - ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ವಿಚಾರಮಾಡಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅಪ್ಪಣೆಕೊಟ್ಟರು?” ಎಂದು ಅವರ ನಾಯಕರನ್ನು ಪ್ರಶ್ನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:9
4 ತಿಳಿವುಗಳ ಹೋಲಿಕೆ  

ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.


ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು