Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:12 - ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:12
24 ತಿಳಿವುಗಳ ಹೋಲಿಕೆ  

ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,


ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”


ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು