Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:21 - ಕನ್ನಡ ಸತ್ಯವೇದವು C.L. Bible (BSI)

21 ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:21
13 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು