Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:3 - ಕನ್ನಡ ಸತ್ಯವೇದವು C.L. Bible (BSI)

3 “ಅರಸ ಸೈರಸನ ಮೊದಲನೆಯ ವರ್ಷದಲ್ಲಿ, ಅರಸ ಸೈರಸನು ಜೆರುಸಲೇಮಿನ ದೇವಾಲಯದ ಬಗ್ಗೆ ಕೊಟ್ಟ ಅಪ್ಪಣೆ ಇದು: ಬಲವಾದ ಅಸ್ತಿವಾರವನ್ನು ಹಾಕಿ, ಬಲಿಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಇಪ್ಪತ್ತೇಳು ಮೀಟರ್, ಅಗಲ ಇಪ್ಪತ್ತೇಳು ಮೀಟರ್ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಅರಸನಾದ ಕೋರೆಷನು ಯೆರೂಸಲೇವಿುನ ದೇವಾಲಯದ ವಿಷಯ ಕೊಟ್ಟ ಅಪ್ಪಣೆ - ಬಲವಾದ ಅಸ್ತಿವಾರವನ್ನು ಹಾಕಿ ಯಜ್ಞಸಮರ್ಪಣೆಗಾಗಿ ಆಲಯವನ್ನು ತಿರಿಗಿ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವೂ ಅಗಲ ಅರುವತ್ತು ಮೊಳವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:3
16 ತಿಳಿವುಗಳ ಹೋಲಿಕೆ  

ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,


ಆ ನಗರ ಚಚ್ಚೌಕವಾಗಿತ್ತು. ಅದರ ಚದರ ಅಳತೆ 2,400 ಕಿಲೊಮೀಟರುಗಳಷ್ಟಿತ್ತು.


ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II


ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು