Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:6 - ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನಂದರೆ -] ಹೊಳೆಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ - ನೀವು ಅವರ ಗೊಡವೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:6
14 ತಿಳಿವುಗಳ ಹೋಲಿಕೆ  

ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.


ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.


ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು