Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:8 - ಕನ್ನಡ ಸತ್ಯವೇದವು C.L. Bible (BSI)

8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:8
15 ತಿಳಿವುಗಳ ಹೋಲಿಕೆ  

ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.


ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”


ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.


ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.


ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು.


ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು