Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:9 - ಕನ್ನಡ ಸತ್ಯವೇದವು C.L. Bible (BSI)

9 ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:9
13 ತಿಳಿವುಗಳ ಹೋಲಿಕೆ  

“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು.


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು