Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:1 - ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:1
19 ತಿಳಿವುಗಳ ಹೋಲಿಕೆ  

ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.


ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ, ಇವರು.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.


ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಇವನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ;


ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು