Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:10
30 ತಿಳಿವುಗಳ ಹೋಲಿಕೆ  

ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು.


ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು