ಎಜ್ರ 7:16 - ಕನ್ನಡ ಸತ್ಯವೇದವು C.L. Bible (BSI)16 ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, [ಇಸ್ರಾಯೇಲ್] ಸಾಧಾರಣಜನರೂ ಯಾಜಕರೂ ಯೆರೂಸಲೇವಿುನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವೇಚ್ಫೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿ |