Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:17 - ಕನ್ನಡ ಸತ್ಯವೇದವು C.L. Bible (BSI)

17 ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:17
10 ತಿಳಿವುಗಳ ಹೋಲಿಕೆ  

ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.


ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.


ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು