Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:22 - ಕನ್ನಡ ಸತ್ಯವೇದವು C.L. Bible (BSI)

22 ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:22
5 ತಿಳಿವುಗಳ ಹೋಲಿಕೆ  

ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);


ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.


:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು