Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:23 - ಕನ್ನಡ ಸತ್ಯವೇದವು C.L. Bible (BSI)

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:23
8 ತಿಳಿವುಗಳ ಹೋಲಿಕೆ  

ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.


ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.


ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು