ಎಜ್ರ 7:25 - ಕನ್ನಡ ಸತ್ಯವೇದವು C.L. Bible (BSI)25 “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು. ಅಧ್ಯಾಯವನ್ನು ನೋಡಿ |