Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:26 - ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:26
12 ತಿಳಿವುಗಳ ಹೋಲಿಕೆ  

ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.


ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು