Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:7 - ಕನ್ನಡ ಸತ್ಯವೇದವು C.L. Bible (BSI)

7 ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನೊಡನೆ ಕೆಲವು ಮಂದಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಸ್ಥಾನದಾಸರೂ ಅರ್ತಷಸ್ತನ ಆಳಿಕೆಯ ಏಳನೆಯ ವರುಷದಲ್ಲಿ ಯೆರೂಸಲೇವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:7
14 ತಿಳಿವುಗಳ ಹೋಲಿಕೆ  

ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,


ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ ಮಾರ್ಗಶಿರ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು