Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:15 - ಕನ್ನಡ ಸತ್ಯವೇದವು C.L. Bible (BSI)

15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:15
12 ತಿಳಿವುಗಳ ಹೋಲಿಕೆ  

ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್;


ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.


ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;


ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ


ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು