ಎಜ್ರ 8:20 - ಕನ್ನಡ ಸತ್ಯವೇದವು C.L. Bible (BSI)20 ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನದಾಸರಲ್ಲಿ ಇನ್ನೂರಿಪ್ಪತ್ತು ಮಂದಿಯನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು. ಅಧ್ಯಾಯವನ್ನು ನೋಡಿ |
ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.