Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:30 - ಕನ್ನಡ ಸತ್ಯವೇದವು C.L. Bible (BSI)

30 ಆ ಯಾಜಕರು ಹಾಗು ಲೇವಿಯರು ಜೆರುಸಲೇಮಿನ ದೇವಾಲಯಕ್ಕೆ ತಲುಪಿಸುವ ಉದ್ದೇಶದಿಂದ ಆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿ ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಯಾಜಕರೂ ಲೇವಿಯರೂ ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿಸುವದಕ್ಕೋಸ್ಕರ ಬೆಳ್ಳಿ ಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಎಜ್ರನು ತೂಕಮಾಡಿ ಕೊಟ್ಟ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಿಶೇಷ ವಸ್ತುಗಳನ್ನು ಯಾಜಕರು ಮತ್ತು ಲೇವಿಯರು ಸ್ವೀಕರಿಸಿ ಜೆರುಸಲೇಮಿನಲ್ಲಿರುವ ದೇವಾಲಯಕ್ಕೆ ತಲುಪಿಸುವ ಜವಾಬ್ದಾರಿಕೆ ಹೊತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:30
6 ತಿಳಿವುಗಳ ಹೋಲಿಕೆ  

ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II


ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.


ಆ ಸಾಮಾನುಗಳ ಪಟ್ಟಿ ಹೀಗಿದೆ :- ಬಂಗಾರದ ಬೋಗುಣಿಗಳು 30 ಬೆಳ್ಳಿಯ ಬೋಗುಣಿಗಳು 1000 ಇತರ ಬೋಗುಣಿಗಳು 29 ಚಿನ್ನದ ಬಟ್ಟಲುಗಳು 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1000


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು