Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:36 - ಕನ್ನಡ ಸತ್ಯವೇದವು C.L. Bible (BSI)

36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:36
11 ತಿಳಿವುಗಳ ಹೋಲಿಕೆ  

ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.


ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.


ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.


ತರುವಾಯ ನಾನು ರಾಜನಿಗೆ, “ನದಿ ಆಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳಲ್ಲಿ ಹಾದು ಜುದೇಯ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಬೇಕಾಗುತ್ತದೆ.


ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು