Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:12
17 ತಿಳಿವುಗಳ ಹೋಲಿಕೆ  

ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.


ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ನೀವು ಅವರೊಡನೆಯಾಗಲಿ, ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಪ್ಪಂದವನ್ನೂ ಮಾಡಿಕೊಳ್ಳಬಾರದು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು