Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:5 - ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ದೇಹದಂಡನೆಮಾಡುವದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:5
15 ತಿಳಿವುಗಳ ಹೋಲಿಕೆ  

ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.


ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು