Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:6 - ಕನ್ನಡ ಸತ್ಯವೇದವು C.L. Bible (BSI)

6 “ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:6
27 ತಿಳಿವುಗಳ ಹೋಲಿಕೆ  

ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.


ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II


ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.


ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II


“ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು