ಎಜ್ರ 9:7 - ಕನ್ನಡ ಸತ್ಯವೇದವು C.L. Bible (BSI)7 ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ. ಅಧ್ಯಾಯವನ್ನು ನೋಡಿ |