Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:11 - ಕನ್ನಡ ಸತ್ಯವೇದವು C.L. Bible (BSI)

11 ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಗ್ಳೆ ದೆವಾಚ್ಯಾ ಯವ್ಜನಿ ಅನಿ ನಿರ್ದಾರಾ ಪರ್ಕಾರ್ ಹೊಲೆ, ದೆವಾನ್ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಅಪ್ನಾಚಿ ಸ್ವತಾಚಿ ಲೊಕಾ ಕರುನ್ ಎಚುನ್ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಹ್ಯೊ ತೆಜೊ ಸ್ವತಾಚೊ ಉದ್ದೆಶ್ ಹೊವ್ನ್ ಹೊತ್ತೊ, ಹೆ ಸಗ್ಳೆ ಆರಂಬಾಕ್ ನಿರ್ದಾರ್ ಕರಲ್ಲ್ಯಾಚ್ಯಾ ಪರ್ಕಾರ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:11
40 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು