Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಸೆ ರಾತಾನಾ ಕ್ರಿಸ್ತಾತ್ ಸಗ್ಳ್ಯಾಚ್ಯಾನ್ಕಿ ಅದ್ದಿ ಬರೊಸೊ ಥವ್ನ್ ಹೊತ್ತೆ ಅಮಿ ದೆವಾಚ್ಯಾ ಮಹಿಮೆಚೆ ಸ್ತುತಿ ಕರುಕ್ ಪಾಜೆ!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:12
21 ತಿಳಿವುಗಳ ಹೋಲಿಕೆ  

ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು