ಎಫೆಸದವರಿಗೆ 1:17 - ಕನ್ನಡ ಸತ್ಯವೇದವು C.L. Bible (BSI)17 ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೊ ದೆವ್, ಮಹಿಮೆನ್ ಭರಲ್ಲೊ ಬಾಬಾ ತುಮ್ಕಾ ಶಾನ್ಪಾನ್ ಅನಿ ದೆವಾಕುಚ್ ತುಮ್ಕಾ ದಾಕ್ವುನ್ ದಿತಲೊ ಪವಿತ್ರ್ ಆತ್ಮೊ ದಿಂವ್ದಿ, ಅಸೆ ತುಮಿ ತೆಕಾ ವಳ್ಕಿ ಸಾರ್ಕೆ ಹೊಂವ್ದಿ ಮನುನ್ ಮಿಯಾ ಮಾಗ್ತಾ. ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.