Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ವಿಶ್ವಾಸ್ ಕರ್ತಲ್ಯಾ ಅಮ್ಚ್ಯಾ ಮದ್ದಿ ಕಾಮ್ ಕರ್ತಲೊ ತೆಚೊ ಬಳ್ ಕೆವ್ಡೊ ಮೊಟೊ ಹಾಯ್ ಹ್ಯೊ ಬಳ್ ಅಮ್ಚ್ಯಾ ಮದ್ದಿ ತ್ಯಾಚ್ ಲೈ ಮೊಟ್ಯಾ ಬಳಾಚ್ಯಾ ವೈನಾ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:19
19 ತಿಳಿವುಗಳ ಹೋಲಿಕೆ  

ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು