Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:20 - ಕನ್ನಡ ಸತ್ಯವೇದವು C.L. Bible (BSI)

20-21 ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೊಚ್ ಮೊಟೊ ಬಳ್ ತೆನಿ ವಾಪ್ರುನ್ ಕ್ರಿಸ್ತಾಕ್ ಮರಲ್ಲ್ಯಾಕ್ನಾ ಝಿತ್ತೊ ಕರ್ಲ್ಯಾನ್ ಅನಿ ಸರ್ಗಾಚ್ಯಾ ರಾಜಾತ್ ಅಪ್ನಾಚ್ಯಾ ಉಜ್ವ್ಯಾ ಭಾಜುಕ್ ತೆಕಾ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:20
33 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಅದಕ್ಕೆ ಯೇಸು, “ಹೌದು ನಾನೇ, ಸರ್ವಶಕ್ತ ದೇವರ ಬಲಗಡೆ ನರಪುತ್ರನು ಆಸೀನನಾಗಿ ಇರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ಥಾನಗೊಳಿಸಿ ಪ್ರತ್ಯಕ್ಷರಾಗುವಂತೆ ಮಾಡಿದರು.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು