Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5-6 ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮ್ಚ್ಯಾ ವರ್ತಿ ಹೊತ್ತ್ಯಾ ಪ್ರೆಮಾ ಸಾಟ್ನಿ ಕ್ರಿಸ್ತ್ ಜೆಜು ವೈನಾ ಅಮ್ಕಾ ಅಪ್ಲಿ ಸ್ವತಾಚಿ ಪೊರಾ ಕರುನ್ ಘೆವ್ಕ್ ತೆನಿ ಅದ್ದಿಚ್ ನಿರ್ದಾರ್ ಕರಲ್ಯಾನ್, ತಿ ತೆಜಿ ಇಚ್ಚ್ಯಾ ಅನಿ ಉದ್ದೆಸ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:5
32 ತಿಳಿವುಗಳ ಹೋಲಿಕೆ  

ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.


“ಈಗತಾನೆ. ‘ನೀವೆ ನನ್ನ ತಂದೆ, ನನ್ನ ಯೌವನದ ಆಪ್ತರು’ ಎಂದು ಕರೆಯುತ್ತಿರುವೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು