Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಪ್ನಾಚ್ಯಾ ಉದ್ದೆಶಾ ಪರ್ಕಾರ್ ಕರ್ಲ್ಯಾನ್, ಅನಿ ತೆನಿ ಅದ್ದಿಚ್ ನಿರ್ದಾರ್ ಕರಲ್ಲಿ ಅಪ್ಲಿ ಗುಟ್ಟಾಚಿ ಯೆವ್ಜನ್ ಕ್ರಿಸ್ತಾಚ್ಯಾ ವೈನಾ ಅಮ್ಕಾ ಕಳ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:9
28 ತಿಳಿವುಗಳ ಹೋಲಿಕೆ  

ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ನಿಮ್ಮ ದೂರೇನು? ನೀವೆಲ್ಲರು ನನಗೆ ದ್ರೋಹಿಗಳಾದಿರಿ, ಏಕೆ?


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು