Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:1 - ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಟಿ ತುಮ್ಚ್ಯಾ ಪಾಪಾಕ್ ಲಾಗುನ್ ಅನಿ ಖಾಯ್ಲ್ ಹೊವ್ನ್ ಚಲಿನಸಲ್ಯಾಕ್ ಲಾಗುನ್ ತುಮಿ ಆತ್ಮಿಕ್ ರಿತಿನ್ ಮರುನ್ ಗೆಲ್ಲ್ಯಾಸಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:1
21 ತಿಳಿವುಗಳ ಹೋಲಿಕೆ  

ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು