Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾನ್ ಅಮ್ಕಾ ರಚಲೆ ಹಾಯ್ ಅನಿ ಕ್ರಿಸ್ತ್ ಜೆಜುಚ್ಯಾ ಎಕ್ಟಟ್ಟಾ ವೈನಾ ತೆನಿ ಅಮ್ಕಾ ಬರಿಕಾಮಾ ಕರ್ತಲೆ ಜಿವನ್ ಕರುಕ್ ರಚಲೆ ಹಾಯ್, ಹೆ ತೆನಿ ಅಮ್ಚ್ಯಾ ಸಾಟ್ನಿ ಅದ್ದಿಚ್ ತಯಾರ್ ಕರುನ್ ಥವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:10
58 ತಿಳಿವುಗಳ ಹೋಲಿಕೆ  

ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


“ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು : ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.


ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.


ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.


ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು