ಎಫೆಸದವರಿಗೆ 2:15 - ಕನ್ನಡ ಸತ್ಯವೇದವು C.L. Bible (BSI)15 ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೊ ಜುದೆವಾಂಚೆ ಖಾಯ್ದೆ ಅನಿ ನಿಯಮಾಕ್ನಿ ಕಡೆಕ್ ಕರ್ತಾ, ಅಸೆ ಅಪ್ನಾಚ್ಯಾ ಎಕ್ವಟ್ಟಾ ವೈನಾ ದೊನ್ ರಿತಿಚ್ಯಾ ಲೊಕಾಂಚ್ಯಾ ಮದ್ದಿ ಸಮಾಧಾನ್ ಹಾನುನ್ ಎಕ್ ನ್ಹವಿ ಲೊಕಾ ಕರ್ತಾ. ಅಧ್ಯಾಯವನ್ನು ನೋಡಿ |